




ಕಡಬ ಟೈಮ್ಸ್(KADABA TIMES):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ ನಿವಾಸಿ ಶಫೀಕ್ ಬಂಧಿತರು.

ಪೊಲೀಸರು 6 ತಂಡಗಳನ್ನು ರಚಿಸಿ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದರು. 15 ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪೊಲೀಸರ ಒಂದು ಕೇರಳದಲ್ಲೂ ತನಿಖೆ ನಡೆಸಿತ್ತು.
ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಇಂದು ಮದ್ಯಾಹ್ನ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ವಲಯ ಐಜಿ ದೇಚಜ್ಯೋತಿ ರೇ, ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.