




ಕಡಬ ಟೈಮ್ಸ್(KADABA TIMES):ಕಡಬ: ದೇಶದ ಅಭಿವೃದ್ಧಿಯಲ್ಲಿ ಕಂಪೆನಿಗಳ ಪಾತ್ರ ಹಿರಿದಾಗಿದ್ದು, ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ಸ್ವ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಭಾರತ ನಿರ್ಮಾಣದ ಹಿರಿಯರ ಕನಸು ಸಾಕಾರಗೊಳಿಸಲು ಯುವ ಜನತೆ ಮುಂದಾಗಬೇಕು ಎಂದು ಸಚಿವ ಎಸ್. ಅಂಗಾರ ಹೇಳಿದರು.
ಅವರು ಜುಲೈ 13ರಂದು ಕಡಬದಲ್ಲಿ ಉದ್ಘಾಟನೆಗೊಂಡ ಖಾಸಗಿ ಸಂಸ್ಥೆಯೊಂದರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸುದ್ದಿಯನ್ನೂ ಓದಿರಿ:ಆರು ಬಾರಿ ಗೆದ್ದ ಸುಳ್ಯದ ಅಂಗಾರರ ಕ್ಷೇತ್ರಕ್ಕೆ ಝೀರೋ ಟ್ರಾಫಿಕ್ ನಲ್ಲಿ ಬಂದ ಸಿಎಂ|ಜನರ ಸಮಸ್ಯೆ ಆಲಿಸದೆ ತುರ್ತುನಿರ್ಗಮನ
ರಾಜ್ಯ ಹಾಗೂ ಕೇಂದ್ರ ಸರಕಾರಗಳು ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿದೆ. ಅದನ್ನು ಸದುಪಯೋಗ ಮಾಡಿಕೊಂಡು ನಿರುದ್ಯೋಗ ನಿವಾರಣೆಯತ್ತ ಯುವ ಜನತೆ ಹೆಜ್ಜೆ ಇಡಬೇಕು. ಕೇಂದ್ರ ಸರಕಾರದ ಮತ್ಸ್ಯ ಸಂಪದ ಯೋಜನೆಯಲ್ಲಿ ಒಳನಾಡು ಮೀನುಗಾರಿಕೆಗೆ ಮಹಿಳೆಯವರಿಗೆ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಶೇ. 60 ಸಬ್ಸಿಡಿಯಲ್ಲಿ ಸಾಲ ಸೌಲಭ್ಯ ನೀಡುತ್ತಿದ್ದು, ಅರ್ಹ ಫಲಾನುಭವಿಗಳು ಈ ರೀತಿಯ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದರು.