




ಕಡಬ ಟೈಮ್ಸ್(KADABA TIMES):ಸುಳ್ಯ/ಬೆಳ್ಳಾರೆ:ಕಳಂಜದಲ್ಲಿ ಅಮಾಯಕ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆಯತ್ನ ನಡೆಸಿದ್ದು, ಈ ಘಟನೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನ ಸಭಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಪತ್ರಿಕಾ ಹೇಳಿಕೆ ನೀಡಿ ನಿನ್ನೆ ತಡ ರಾತ್ರಿ ಗುಂಪೊಂದು ಕ್ಷುಲ್ಲಕ ವಿಚಾರಕ್ಕೆ ಸಂಬಂಧಪಟ್ಟು ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಕೊಲೆಗೈಯಲು ಯತ್ನಿಸಿದೆ ದಾಳಿಗೊಳಗಾದ ಯುವಕ ಜೀವನ್ಮರಣ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಶಾಂತವಾಗಿರುವ ಸುಳ್ಯ ತಾಲೂಕಿನಲ್ಲಿ ಈ ರೀತಿಯ ಗುಂಪು ಹಲ್ಲೆ ನಡೆಸಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಕೂಡಲೇ ಕೊಲೆಯತ್ನ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದಲ್ಲಿ ಪಕ್ಷ ಇದರ ವಿರುದ್ಧವಾಗಿ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.