




ಕಡಬ ಟೈಮ್ಸ್(KADABA TIMES):ಕಡಬ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಕಡಬ ಸಹಿತ ಜಿಲ್ಲೆಯ ಸುಳ್ಳ, ಪುತ್ತೂರು ,ಕಡಬ ತಾಲೂಕು ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ.
ಕಡಬದಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಮಾಡುವಂತೆ ಮನವಿಯನ್ನು ಮಾಡಲಾಗಿದೆ.ಅದರಂತೆ ವರ್ತಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಸಹರಿಸುತ್ತಿದ್ದಾರೆ.

ಈ ಸುದ್ದಿ ಓದಿರಿ: ಬಿಜೆಪಿ ಯುವ ನಾಯಕ ಪ್ರವೀಣ್ ಮೃತ ದೇಹದ ಅಂತಿಮ ಯಾತ್ರೆ ಹಿನ್ನಲೆ – ಪುತ್ತೂರಿನಲ್ಲಿ ಬಿಗಿ ಬಂದೋಬಸ್ತ್
ವಾಹನ ಸಂಚಾರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.