ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ:ಓರ್ವ ಆರೋಪಿಯ ಬಂಧನ

ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ:ಓರ್ವ ಆರೋಪಿಯ ಬಂಧನ

Kadaba Times News

ಕಡಬ ಟೈಮ್ಸ್(KADABA TIMES):ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ.ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ಸಂದರ್ಭ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಗೆ ಜು.8ರಂದು ರಾತ್ರಿ ವಿದ್ಯಾರ್ಥಿನಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ.ಹೀಗಾಗಿ ವಿದ್ಯಾರ್ಥಿನಿ ಹೆದರಿ ಮನೆಯವರಿಗೆ ವಿಷಯ ತಿಳಿಸಿರಲಿಲ್ಲ.

ಈ ಸುದ್ದಿಯನ್ನೂ ಓದಿರಿ:ಬಿಸಿ ನೀರು ಕಾಯಿಸುವ ವಿದ್ಯುತ್ ಕಾಯಿಲ್ ಶಾಕ್| ಸ್ನಾನಗೃಹದಲ್ಲೇ ವ್ಯಕ್ತಿ ಸಾವು

ಜು.16ರಂದು ತಾಯಿಗೆ ವಿಷಯ ತಿಳಿಸಿದ ಬಳಿಕ ವಿದ್ಯಾರ್ಥಿನಿ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top