




ಕಡಬ ಟೈಮ್ಸ್(KADABA TIMES):ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಬಿಜೆಪಿ ನಾಯಕರಿಂದಲೇ ಆಕ್ರೋಶ ವ್ಯಕ್ತವಾಗಿದೆ.
ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಹಲವಾರು ಬಿಜೆಪಿ ಪ್ರಮುಖರಿಂದ ಸಾಮೂಹಿಕ ರಾಜೀನಾಮೆ ಪರ್ವ ಆರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾದ ಹಲವು ನಾಯಕರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಸ್ವಪಕ್ಷದ ಕಾರ್ಯಕರ್ತರನ್ನು ಉಳಿಸಿಕೊಳ್ಳಲಾಗದೆ ಇರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ . ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಮುಖರು ರಾಜೀನಾಮೆ ಸಲ್ಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸ್ವ ಪಕ್ಷದ ಮೇಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷದ ಜವಾಬ್ದಾರಿ ಹೊಂದಿರುವ ಹಲವಾರು ನಾಯಕರಿಂದ ಬಿಜೆಪಿ ವಿರುದ್ಧ ಬಲವಾದ ವಿರೋಧ ಕೇಳಿಬಂದಿದ್ದು, ದ.ಕ. ಜಿಲ್ಲೆಯ ನಾಯಕರಿಂದ ರಾಜೀನಾಮೆಯ ಬಗ್ಗೆ ಯಾವುದೇ ನಿರ್ಧಾರವಾಗಿರುವ ಮಾಹಿತಿ ಲಭಿಸಿಲ್ಲ .