




ಕಡಬ ಟೈಮ್ಸ್(KADABA TIMES):ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ ಎಂದರು.

ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದೂ ಮುಖ್ಯಮಂತ್ರಿ ಹೇಳಿದರು.