




ಕಡಬ ಟೈಮ್ಸ್(KADABA TIMES):ಬೆಳ್ಳಾರೆ:ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಯ ಮೆರವಣಿಗೆ 1 ಗಂಟೆ ಸುಮಾರಿಗೆ ಬೆಳ್ಳಾರೆ ತಲುಪಿದ ವೇಳೆ ಅಂತಿಮ ದರ್ಶನ ಪಡೆಯಲು ಬಂದ ಬಿಜೆಪಿ ನಾಯಕರಿಗೆ ಹಾಗೂ ಅರ್ ಎಸ್ ಎಸ್ ಮುಖಂಡರಿಗೆ ಘೇರಾವ್ ಹಾಕಿ , ದಿಕ್ಕಾರ ಕೂಗಿ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ.
ಈ ವೇಳೆ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದ್ದು ಹಲವರು ಗಾಯಗೊಂಡಿದ್ದಾರೆ . ನ್ಯಾಯಕ್ಕಾಗಿ ಆಗ್ರಹಿಸಿದ ಕಾರ್ಯಕರ್ತರು ಸಂಸದ ನಳೀನ್ ಕುಮಾರ್ ಕಟೀಲ್, ಸಚಿವರಾದ ಸುನೀಲ್ ಕುಮಾರ್, ಅರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕರವಾಳಿ ಭಾಗದ ಬಿಜೆಪಿ ಶಾಸಕರು ಕಾರ್ಯಕರ್ತರ ಆಕ್ರೋಶದ ಬಿಸಿ ಅನುಭವಿಸಿದರು. ಬಾಯಿ ತೆರೆಯಲು ಅವಕಾಶ ನೀಡದೆ ಹಿಗ್ಗಾಮುಗ್ಗಾ ಜಾಡಿಸಿ ಕಾರ್ಯಕರ್ತರನ್ನು ಸಮಾಧನ ಪಡಿಸಲು ಸಾಧ್ಯವಾಗದೇ ಈ ನಾಯಕರು ಮೌನಕ್ಕೆ ಶರಣಾದರು.

ಕಾರ್ಯಕರ್ತರ ಬೈಗುಳಗಳ ತೀವ್ರತೆಯನ್ನು ತಾಳಲಾಗದೇ ಅಲ್ಲಿಂದ ಜಾಗ ಖಾಲಿ ಮಾಡಲು ಪ್ರಯತ್ನಿಸಿದಾಗ ಕಾರ್ಯಕರ್ತರು ಇನ್ನಷ್ಟು ಆಕ್ರೋಶಗೊಂಡರು. ನಳಿನ್ , ಸಚಿವ ಸುನೀಲ್ ಕುಮಾರ್ ಹಾಗೂ ಪ್ರಭಾಕರ ಭಟ್ ಕಾರಿನಲ್ಲಿ ಕೂತಾಗ ಆ ಕಾರನ್ನು ಘೇರಾವ್ ಹಾಕಿದ ಕಾರ್ಯಕರ್ತರು ಅದರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಹೆಲ್ಮೇಟ್ ನಿಂದಲೂ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ನ್ಯಾಯ ಬೇಕೆ ಬೇಕು ಎಂದು ಕಿಕ್ಕಿರಿದು ಸೇರಿದ ಕಾರ್ಯಕರ್ತರು ಘೋಷಣೆ ಕೂಗಿದ್ದು ಅವರ ಆಕ್ರೋಶ ಮುಗಿಲು ಮುಟ್ಟಿದೆ