




ಕಡಬ ಟೈಮ್ಸ್(KADABA TIMES):ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿ ಹಾಸನ ಎಸ್ ಪಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ವಾಹನ ಸಂಚಾರಕ್ಕೆ ನಿಷೇಧವಿರಲಿದೆ.
ಹಾಸನದ ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ವಾಹನಸಂಚಾರಕ್ಕೆ ಯೋಗ್ಯವಾಗಿಲ್ಲ. ಇನ್ನು ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆಯಿರುವುದರಿಂದ ವಾಹನಸಂಚಾರ ಬಂದ್ ಮಾಡಲಾಗಿದೆ.

ರಸ್ತೆ ಸಂಚಾರ ಬಂದ್ ಆಗಿರುವುದರಿಂದ ವಾಹನ ಸವಾರರು ಬದಲಿ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾದ ಹಿನ್ನೆಲೆಯಲ್ಲಿ ಮಾಣಿ ಸಮೀಪದಿಂದಲೇ ಘನ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ಮತ್ತೆ ಭೂಕುಸಿತವಾಗ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಲಾಗಿದೆ.