ಕೃಷಿ ಇಲಾಖೆ: ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ : ಆ.31 ಕೊನೆಯ ದಿನ

ಕೃಷಿ ಇಲಾಖೆ: ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ : ಆ.31 ಕೊನೆಯ ದಿನ

Kadaba Times News

ಕಡಬ ಟೈಮ್ಸ್(KADABA TIMES):2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ ಆತ್ಮ ಯೋಜನೆಯಲ್ಲೂ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ದು ರೈತರಿಗೆ ಪುರಸ್ಕರಿಸುಂತೆ ಸೂಚಿಸಲಾಗಿದೆ.

ಒಬ್ಬ ರೈತ ತಾನು ನಿರ್ವಹಿಸುವ ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶ ವಿರುತ್ತದೆ.ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಬಳಕೆ (ಹಸಿರು ಮನೆ, ಅಭಿವೃದ್ಧಿ, ಸಸ್ಯ ಕಾಶಿ, ಕೃಷಿ ಯಾಂತ್ರೀಕರಣ ಇತ್ಯಾದಿ) ಕೃಷಿ ಸಂಸ್ಮರಣೆ ಇತ್ಯಾದಿ ವಿಭಾಗಗಳಿವೆ.

ಇವುಗಳಲ್ಲಿ ಒಂದು ವಿಭಾಗಕ್ಕೆ ಅರ್ಜೀ ಸಲ್ಲಿಸಬಹುದು, ಅರ್ಜಿಯೊಂದಿಗೆ, ತಾವು ಮಾಡುವ ಕೃಷಿ ಚಟುವಟಿಕೆಗಳ ದಾಖಲೆ, ವೀಡಿಯೋ ಚಿತ್ರಿಕರಣ ಇತ್ಯಾದಿ ಲಗತ್ತಿಸಬೇಕು. ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಈ ಹಿಂದೆ ಪ್ರಶಸ್ತಿ ಪಡೆದವರು ಮುಂದಿನ ಹಂತಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ  ಕೃಷಿ ಇಲಾಖೆಯನ್ನು ಸಂಪರ್ಕಿಸಿ. ಅರ್ಜಿ ಸಲ್ಲಿಸಲು ಆ.೩೧ ಕೊನೆಯ ದಿನವಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top