




ಕಡಬ ಟೈಮ್ಸ್(KADABA TIMES):ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23 ವ.) ಮೃತಪಟ್ಟ ಯುವಕ

ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.