




ಕಡಬ ಟೈಮ್ಸ್(KADABA TIMES):ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ ಸೇರ್ಪಡೆ ಮಾಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಿದೆ.
ಎಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳು ಮರು ಸ್ಥಾಪನೆಯಾಗಲಿದ್ದು ಎಸಿಬಿಯಲ್ಲಿರುವ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ ಬರಲಿದ್ದಾರೆ.ಇದುವರೆಗೆ ಎಸಿಬಿ ನಡೆಸಿರುವ ತನಿಖೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ತಕ್ಷಣವೇ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾ. ಕೆ.ಎಸ್. ಹೇಮಲೇಖರವರ ಪೀಠ ಮಹತ್ವದ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಕೋರ್ಟ್ ಎಲ್ಲಾ ಪ್ರಕರಣಗಳನ್ನೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿದೆ. ಲೋಕಾಯುಕ್ತಕ್ಕೆ ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕೇ ಹೊರತು ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.