




ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂವರು ಕೂಡ ಸ್ಥಳೀಯರಾಗಿದ್ದು, ಇವರೇ ಪ್ರವೀಣ್ ಅಂಗಡಿ ಬಳಿ ಪ್ರವೀಣ್ ರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿದ್ದರು.ಮಧ್ಯಾಹ್ನ 12-30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನೆವಾಣೆ ಅವರು ಸುದ್ದಿಗೋಷ್ಟಿ ಕರೆದಿದ್ದು, ಸುದ್ದಿಗೋಷ್ಟಿಯಲ್ಲಿ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.