




ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ದ.ಕ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ನಾವೂರಿನಲ್ಲಿ
ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದೆ.
ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿ ಗಂಭೀರತೆ ಅರಿತು ಬಳಿಕ ಮಗುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕರುಣೆ ಇಲ್ಲದ ತಾಯಿಯ ಈ ನಡೆಯನ್ನು ಹಲವರು ಖಂಡಿಸಿದ್ದು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ