




ಕಡಬ ಟೈಮ್ಸ್(KADABA TIMES):ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಯು ಯು ಲಲಿತ್ ಅವರ ಹೆಸರನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಶಿಫಾರಸು ಮಾಡಿದ್ದಾರೆ.
ತಮ್ಮ ಉತ್ತರಾಧಿಕಾರಿ ಹೆಸರನ್ನು ಶಿಫಾರಸು ಮಾಡುವಂತೆ ಸಿಜೆಐ ರಮಣ ಅವರಿಗೆ ಸರ್ಕಾರ ಪತ್ರ ಬರೆದಿತ್ತು.
ಸಿಜೆಐ ರಮಣ ಅವರು ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ. ಬಳಿಕ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಲಲಿತ್ ಬರುವ ನವೆಂಬರ್ 8ರಂದು ನಿವೃತ್ತರಾಗಲಿದ್ದಾರೆ.

ನಂತರ ನ್ಯಾ. ಡಿ ವೈ ಚಂದ್ರಚೂಡ್ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದು ಎರಡು ವರ್ಷಗಳಷ್ಟು ದೀರ್ಘಕಾಲ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.