




ಕಡಬ ಟೈಮ್ಸ್(KADABA TIMES):ಶಿರಾಡಿ ಘಾಟಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದ ಸಂದರ್ಭ ಪ್ರಭಾವ ಬಳಸಿ ಕೆಲವೊಂದು ವಾಹನಗಳು ಸಂಚರಿಸುತ್ತಿರುವುದನ್ನು ಖಂಡಿಸಿ, ಅವಕಾಶ ಕೊಡುವುದಾದರೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಕ್ಕೆ ನನಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ ಎಂದು ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಗೌರವಾಧ್ಯಕ್ಷ ಮೊಯ್ದೀನ್ ಸಾಹೇಬ್ ಕೆ. ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಬಗ್ಗೆ ಧ್ವನಿ ಮುದ್ರಿತ ಸುಳ್ಳು ಆರೋಪಗಳ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪಸರಿಸಿ ಮಾನಹಾನಿ ಮಾಡುತ್ತಿದ್ದಾರೆ. ಕೆಲವೊಂದು ವಾಹನ ಚಾಲಕರು ತನ್ನ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಸುತ್ತಿದ್ದಾರೆ.

ಅಂಥವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.