




ಕಡಬ ಟೈಮ್ಸ್(KADABA TIMES):ನೆಲ್ಯಾಡಿ/ಗುಂಡ್ಯ: ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು .

ಕಾರು ಹಾಸನ ಜಿಲ್ಲೆಯ ಸಕಲೇಶಪುರದಿಂದ ಕಡಬ ತಾಲೂಕಿನ ರಾಮಕುಂಜಕ್ಕೆ ಹಿಂತಿರುಗುತ್ತಿದ್ದಾಗ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಘಟಿಸಿದೆ .ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರ ಕಾಲು ಮತ್ತು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.