




ಕಡಬ ಟೈಮ್ಸ್(KADABA TIMES):ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದ.ಕ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್ ಎಂಬಾತ ಬಂಧಿತ ಆರೋಪಿ.

ಆರೋಪಿಯ ವಿರುದ್ಧ ಮೂಡುಬಿದಿರೆ, ವೇಣೂರು, ಬಜ್ಪೆ, ಮಂಗಳೂರು ಗ್ರಾಮಾಂತರ, ಅಜೆಕಾರು, ಲಿಂಗದಹಳ್ಳಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.
ಅದರಂತೆ ಶುಕ್ರವಾರ ಈತ ಮನೆಯಲ್ಲಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು.ಈ ವೇಳೆ ಆರೋಪಿ ಮನೆಯಿಂದ ಓಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದು ಬೆನ್ನಟ್ಟಿ ಆರೋಪಿಯನ್ನು ಬಂಧಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.