




ಕಡಬ ಟೈಮ್ಸ್(KADABA TIMES):ಕಡಬ/ಮರ್ದಾಳ: ಗ್ರಾಮೀಣ ಜನತೆಗೆ ಅರ್ಥಪೂರ್ಣ ಬದುಕು ರೂಪಿಸುವಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹೇಳಿದರು.
ಅವರು ಮರ್ಧಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಿಳಿನೆಲೆ ವಲಯ ಇದರ ಪ್ರಗತಿಬಂಧು ಸ್ವಸಹಾಯ ಸಂಘಗಳ ಬಂಟ್ರ 102ನೇ ನೆಕ್ಕಿಲಾಡಿ, ಐತ್ತೂರು ‘ಎ’, ಕೊಣಾಜೆ, ಬೊಳ್ಳೂರು, ಕೋಡಿಂಬಾಳ ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಯೋಜನೆಯು ಗ್ರಾಮೀಣ ಜನತೆಯನ್ನು ದುಶ್ಚಟಗಳಿಂದ ಮುಕ್ತಗೊಳಿಸಲು ಶ್ರಮಿಸಿದೆ. ಇಂದು ಗ್ರಾಮೀಣ ಜನತೆಯ ಬದುಕು ಮಾತ್ರವಲ್ಲದೆ ಗ್ರಾಮ ದ ದೇವಾಲಯ, ಭಜನಾ ಮಂದಿರ, ಶಾಲೆಗಳು ಧಾರ್ಮಿಕ ಕೇಂದ್ರಗಳು ಅಭಿವೃದ್ಧಿಯಾಗಿದೆ. 22 ಜನರಿಂದ ಆರಂಭವಾದ ಯೋಜನೆ ಇಂದು ರಾಜ್ಯಾದ್ಯಂತ ವಿಸ್ತರಿಸಿ 45ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವುದು ಗ್ರಾಮ ಗ್ರಾಮಗಳ ಅಭಿವೃದ್ಧಿಯ ಸಂಕೇತವಾಗಿದೆ ಎಂದರು.
ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ ಶಂಭೂಗ ,ಮಾಣಿಕ್ಯ ಬೀಡು ಅವರು ಮಾತನಾಡಿ ಗ್ರಾಮೀಣ ಜನತೆಗೆ ವಿಶೇಷ ಆಚರಣೆ, ಸಂಸ್ಕೃತಿ ಪರಂಪರೆಯ ಹೆಸರಿದ್ದರೂ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ ಎಂದರು.ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮರ್ಧಾಳ ಸೈಂಟ್ ಮೇರೀಸ್ ಪ್ರೌಢ ಶಾಲಾ ಮುಖ್ಯಗುರುಗಳಾದ ಈಶೋ ಫಿಲಿಪ್ ಮಾತನಾಡಿ, ಗ್ರಾಮದ ಜನತೆಯು ಸ್ವಾವಲಂಬಿ ಬದುಕಿನ ಜೊತೆಗೆ ಅಧಿಕಾರದ ವಿಕೇಂದ್ರೀಕರಣಕ್ಕೆ ಮಹತ್ವದ ಕೊಡುಗೆ ನೀಡುವಲ್ಲಿ ಯೋಜನೆಯ ಪಾತ್ರ ಮಹತ್ವದಾಗಿದೆ ಎಂದರು

ಕಡಬ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಮೇಶ್ ಭಟ್ ಕಲ್ಪುರೆ , ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಮನೋಹರ ರೈ, ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತರಾಮ ಗೌಡ ಪೊಸವಳಿಕೆ, ಮರ್ಧಾಳ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಶೆಟ್ಟಿ ಅತ್ಯಡ್ಕ, ಮರ್ಧಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಕೋಡಂದೂರು, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಪ್ಪ ಗೌಡ ಕಡ್ಯ ಕೊಣಾಜೆ, ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ,ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ,ಕೋಡಿಂಬಾಳ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ನಾಯ್ಕ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು..
ಬಿಳಿನೆಲೆ ವಲಯದ ಅಧ್ಯಕ್ಷ ಸತೀಶ್ ಎರ್ಕ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. .ವೇದಿಕೆಯಲ್ಲಿ ನಿರ್ಗಮಿತ ಒಕ್ಕೂಟದ ಅಧ್ಯಕ್ಷರುಗಳಾದ ರಾಮಚಂದ್ರ ಮಂಡೆಕರ, ಗಣಪಯ್ಯ ಗೌಡ ಪಂಜೋಡಿ, ರಘರಾಮ ಭಟ್, ಪುಂಡಾರೀಕ್ಷಾಕ,ಕುಸುಮ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೂತನ ಒಕ್ಕೂಟದ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು ನಿರ್ಗಮಿತ ಅಧ್ಯಕ್ಷರಾದ ಗಣಪಯ್ಯ ಗೌಡ ಪಂಜೋಡಿ, ಕುಸುಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸ್ವಾಗತಿಸಿ, ಬಿಳಿನೆಲೆ ವಲಯದ ಮೇಲ್ಚಿಚಾರಕರಾದ ಆನಂದ ವಂದಿಸಿದರು. ಕಡಬ ವಲಯದ ಮೇಲ್ವಿಚಾರಕರಾದ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.