




ಕಡಬ ಟೈಮ್ಸ್(KADABA TIMES):ಬೆಳ್ಳಾರೆ: ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ.
ಈ ನಡುವೆ ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದ್ದಾರೆ.

ಪ್ರವೀಣ್ ನಡೆಸುತ್ತಿದ್ದ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮುಂದೆಯೇ ಕೊಲೆ ನಡೆದಿತ್ತು.ಇದೀಗ ಕೊಲೆ ನಡೆಸಿದ ಕುರಿತು ಆರೋಪಿಗಳ ಸ್ಥಳ ಮಹಜರು ಡಿವೈಎಸ್ಪಿ ಗಾನ.ಪಿ ಕುಮಾರ್ ನೇತೃತ್ವದಲ್ಲಿ ನಡೆದಿದೆ.
ಆರೋಪಿಗಳು ಬೇರೆ ಬೇರೆ ಕಡೆ ಸ್ಥಳ ಬದಲಾಯಿಸುತ್ತಿದ್ದರಿಂದ ಪತ್ತೆ ಹಚ್ಚಲು ಪೊಲೀಸರಿಗೆ ತಡವಾಗಿತ್ತು. ಇದೀಗ 15 ದಿನಗಳ ನಂತರ ಇದೀಗ ಪ್ರಮುಖ ಅರೋಪಿಗಳನ್ನು ಪತ್ತೆಹಚ್ಚಿದ್ದಾರೆ.