




ಕಡಬ ಟೈಮ್ಸ್(KADABA TIMES):ಬೆಳ್ಳಾರೆ/ಸುಳ್ಯ: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಸಾಕಿದ ನಾಯಿಮರಿ ಆನಾರೋಗ್ಯದಿಂದ ಪ್ರಾಣ ಕಳೆದುಕೊಂಡಿದೆ.
ಪ್ರಾಣಿ ಪ್ರಿಯರಾಗಿದ್ದ ಪ್ರವೀಣ್ ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ಗುಣ ಹೊಂದಿದ್ದರು. ಅತ್ಯಂತ ಅಕ್ಕರೆಯಿಂದ ಸಾಕಿದ್ದ ಶ್ವಾನ ಇದೀಗ ಮೃತಪಟ್ಟಿದೆ. ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಈ ಶ್ವಾನ ಅನಾರೋಗ್ಯದಿಂದ ನರಳುತ್ತಿತ್ತು ಎನ್ನಲಾಗುತ್ತಿದೆ.

ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ ಮರಿಗಳನ್ನು ರಕ್ಷಿಸಿದ್ದರು. ಈ ಕುರಿತಂತೆ ಅವರೇ ಜಾಲತಾಣದಲ್ಲಿ ಫೋಟೋ ಸಹಿತ ಮಾಹಿತಿ ಪ್ರಕಟಿಸಿದ್ದರು. ಒಂದು ಜೀವ ಉಳಿಸಿದ ಸಾರ್ಥಕತೆ ಎಂದು ಹೇಳಿಕೊಂಡಿದ್ದರು.