




ಕಡಬ ಟೈಮ್ಸ್(KADABA TIMES):ಸಾವರ್ಕರ್ – ಟಿಪ್ಪು ಫೋಟೋ ವಿಷಯಕ್ಕೆ ವಿವಾದ ಹುಟ್ಟಿಕೊಂಡಿರುವ ಬೆನ್ನಲ್ಲೇ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.ಈಗಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಗಾಂಧಿ ಬಜಾರ್ ನಲ್ಲಿರುವ ನಂದಿ ಟೆಕ್ಸ್ ಟೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರೇಮ್ ಸಿಂಗ್ ಗೆ ಗಾಂಧಿ ಬಜಾರ್ ನ ಉಪ್ಪಾರ ಕೇರಿ ಸಮೀಪ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ.ಗಾಯಾಳನ್ನು ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ತುರ್ತು ನಿಗ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿಬಜಾರ್ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫೋಟೋವನ್ನು ಹಾಕಲಾಗಿತ್ತು. ಈ ವೇಳೆ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಇನ್ನೊಂದು ಗುಂಪು ಹೊರಟಿದೆ. ಈ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ಉಂಟಾಗಿತ್ತು. ಪೊಲೀಸರು ಸಾವರ್ಕರ್ ಫೋಟೋ ತೆರವು ಮಾಡಿ ಎರಡು ಕೋಮಿನವರಿಗೆ ಶಾಂತವಾಗಿರಲು ಸೂಚಿಸಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಸಾವರ್ಕರ್ ಫೋಟೋ ತೆರವು ಮಾಡಿದಕ್ಕೆ ಪ್ರತಿಭಟನೆ ನಡೆಸಿದ್ದು ಸ್ಥಳಕ್ಕೆ ಮತ್ತೊಂದು ಗುಂಪು ನುಗ್ಗಲು ಯತ್ನಿಸಿದ್ದರು ಪರಿಸ್ಥಿತಿ ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.