




ಕಡಬ ಟೈಮ್ಸ್(KADABA TIMES):ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ನಾಯಕನ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಈ ಆದೇಶದ ಬೆನ್ನಲ್ಲೇ ಪ್ರಕರಣ ಸಂಬಂಧ ಎನ್‌ಐಎ, ಭಾರತೀಯ ದಂಡ ಸಂಹಿತೆ 302(ಕೊಲೆ) ಮತ್ತು 120(ಬಿ)(ಕೊಲೆಗೆ ಸಂಚು) ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಅಡಿಯಲ್ಲಿ ಪ್ರಕರಣ ದಾಖಲಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿದ್ದಾರೆ.

ತನಿಖೆ ವಹಿಸಿಕೊಳ್ಳಲು ಎನ್ಐಎಗೆ ನಿರ್ದೇಶನ:ಕರ್ನಾಟಕ ಸರಕಾರದ ಶಿಫಾರಸ್ಸಿನಂತೆ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅವರು ಎನ್‌ಐಎ ಮಹಾ ನಿರ್ದೇಶಕರಿಗೆ ಆ.೩ರಂದು ಆದೇಶ ಮಾಡಿದ್ದಾರೆ.ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೂ ಈ ಕುರಿತು ಮಾಹಿತಿ ನೀಡಲಾಗಿದೆ.