




ಕಡಬ ಟೈಮ್ಸ್(KADABA TIMES): ಪದವಿ ತರಗತಿಗಳಿಗೆ ನಡೆದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷೆಯ ಅಂಕ ಪಟ್ಟಿಗಳು ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ತಿಂಗಳುಗಳೇ ಕಳೆದರೂ ವಿದ್ಯಾರ್ಥಿಗಳ ಕೈ ಸೇರಿಲ್ಲ. ಜತೆಗೆ ಕೆಲವು ವಿಭಾಗಗಳ ಫಲಿತಾಂಶವು ಪ್ರಕಟಗೊಂಡಿಲ್ಲ, ಹೀಗೆ ವಿದ್ಯಾರ್ಥಿಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದಲ್ಲಿ ಆ. ೧೦ರ ಒಳಗೆ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು NSUI ಕರ್ನಾಟಕ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆ ತಿಳಿಸಿದ್ದಾರೆ.
ಇಂತಹ ಸಮಸ್ಯೆಗಳಿಂದಾಗಿ ಪ್ರತಿಷ್ಠಿತ ಕಂಪೆನಿಗಳಿಗೆ ಕ್ಯಾಂಪಸ್ ನಿಂದ ಆಯ್ಕೆಯಾದ ವಿದ್ಯಾರ್ಥಿಗಳು ಪ್ರಮುಖ ದಾಖಲೆಯಾಗಿ ಅಂಕಪಟ್ಟಿ ಸಲ್ಲಿಸಲಾಗುತ್ತಿಲ್ಲ ಹೀಗಾಗಿ ಅವರನ್ನು ಉದ್ಯೋಗದಿಂದ ಕೈ ಬಿಡಲಾಗುತ್ತಿದ್ದು, ಈಗಾಗಲೇ ಹಲವು ವಿದ್ಯಾರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದಾರೆ.

ಅದೇ ರೀತಿ ತೃತೀಯ ಹಾಗೂ ಪಂಚಮ ಸೆಮಿಸ್ಟರ್ ಫಲಿತಾಂಶಾದಲ್ಲೂ ದೋಷವಿದೆ.ಪ್ರಥಮ ಸೆಮಿಸ್ಟರ್ ಪರೀಕ್ಷೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದಿದ್ದು, ಇದರ ಮೌಲ್ಯಮಾಪನವು ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು ವಿದ್ಯಾರ್ಥಿಗಳಲ್ಲಿ ಆತಂಕವನ್ನು ಮೂಡಿಸಿದೆ.ಆಗಸ್ಟ್ ೧೦ ರ ಒಳಗೆ ಈ ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ವಿಶ್ವವಿದ್ಯಾನಿಲಯದ ಹೊರಗಡೆ NSUI ವತಿಯಿಂದ ಆಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ