


ಕಡಬ ಟೈಮ್ಸ್: ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಮತ್ತೆ ಇಳಿಕೆಯಾಗುವ ಜೊತೆಗೆ ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಶುಭಸುದ್ದಿ ಸಿಕ್ಕಿದಂತಾಗಿದೆ.
ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಸೋಮವಾರ 30 ರೂಪಾಯಿ ಕಡಿತಗೊಳಿಸಿದೆ.
ಅದರಂತೆ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆ 1,646 ರೂ.ಗಳಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ. ಆದರೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ 14.2 ಕೆ.ಜಿ ತೂಕದ ಸಿಲಿಂಡರ್ ದರ 803 ಆಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ.
ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿಯೂ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.