ಉಪ್ಪಿನಂಗಡಿಯಲ್ಲಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು ಜೀವ ಉಳಿದ ಸಾಕು ನಾಯಿ

Kadaba Times News

 ಉಪ್ಪಿನಂಗಡಿ: ಪತಿಯೊಂದಿಗೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ  ಮಹಿಳೆಯ ಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿಯಿಂದಾಗಿ ಉಳಿದಿದೆ.

ಪಿಲಿಗೂಡು ನಿವಾಸಿ ಮಹಿಳೆ ಪತಿಯೊಂದಿಗಿನ ವಿರಸದಿಂದ ಗುರುವಾರ ರಾತ್ರಿ ನಡೆದುಕೊಂಡೇ 4 ಕಿ.ಮೀ. ದೂರದ ನೇತ್ರಾವತಿ ಸೇತುವೆಗೆ ಬಂದು ನದಿಗೆ ಹಾರಲು ಯತ್ನಿಸುತ್ತಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ ಹೋಗುತ್ತಿರುವವರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿತ್ತು.

ಉಪ್ಪಿನಂಗಡಿ ಹಳೆ ಸೇತುವೆಯ ಚಿತ್ರ

ಇದೇ ವೇಳೆ ಬೈಕ್ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಒಟ್ಟಾರೆ ಮೂಕಪ್ರಾಣಿಯಾದ ನಾಯಿಯ ತುಡಿತ ಮತ್ತು ಪ್ರಯತ್ನ ಮಹಿಳೆಯನ್ನು ರಕ್ಷಿಸಲು ನೆರವಾದಂತಾಗಿದೆ.

ಶುಕ್ರವಾರ ದಿನವಿಡೀ ರಾಜೀ ಮಾತುಕತೆ ನಡೆಯಿತಾದರೂ ಮಹಿಳೆ ಗಂಡನ ಮನೆಗೆ ಹೋಗಲು ನಿರಾಕರಿಸಿದರು. ಪೊಲೀಸರು ಮತ್ತು ಸ್ಥಳೀಯರು ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ.  ಪ್ರಸ್ತುತ ಅವರು ಟೈಲರಿಂಗ್ಕಲಿಯುತ್ತಿದ್ದ ಗೆಳತಿಯ ಮನೆಯಲ್ಲಿದ್ದು, ಶನಿವಾರ ಬೆಂಗಳೂರಿನ ತಾಯಿ ಮನೆಯಿಂದ ಕರೆದೊಯ್ಯಲು ಬರುವುದಾಗಿ ತಿಳಿದುಬಂದಿದೆ. ಇಬ್ಬರು ಮಕ್ಕಳು ಅಪ್ಪನೊಂದಿಗೆ ಇರುವುದಾಗಿ ತಿಳಿಸಿರುವರು.

ಕೆಲವು ದಿನಗಳಿಂದ ಮೆಕಾನಿಕ್ವೃತ್ತಿಯ ಪತಿ ಮತ್ತು ಪತ್ನಿ ನಡುವೆ ವಿರಸ ಮೂಡಿತ್ತು. ಗುರುವಾರ ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ನೇತ್ರಾವತಿ ಸೇತುವೆಗೆ ಆಗಮಿಸಿದ್ದರು. ಅವರನ್ನು ಹಿಂಬಾಲಿಸಿಕೊಂಡು ನಾಯಿ ಕೂಡ ಬಂದಿತ್ತು. ಮಹಿಳೆ ಸೇತುವೆಯ ಮೇಲೇರಲು ಯತ್ನಿಸುತ್ತಿದ್ದಂತೆ ನಾಯಿ ಅಪಾಯವನ್ನು ಅರಿತು ಚೂಡಿದಾರವನ್ನು ಕಚ್ಚಿ ಹಿಂದಕ್ಕೆ ಎಳೆಯುತ್ತಿದ್ದುದನ್ನು ಗಮನಿಸಿದ ಬೈಕ್ಸವಾರ ಮತ್ತು ಯು.ಟಿ. ಯಾಜ್ಅವರು ಕೂಡಲೇ ಮಹಿಳೆಯನ್ನು ಹಿಂದಕ್ಕೆಳೆದು ರಕ್ಷಿಸಿದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top