


ಕಡಬ :ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಕಡಬ ಪೊಲೀಸರು ಬೆನ್ನಟ್ಟಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ.
ಕಡಬ ತಾಲೂಕು ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಅಂದಾಜು 50 ಕೆಜಿ ಗೋ ಮಾಂಸ ಸಾಗುಸುತ್ತಿದ್ದ ಖಚಿತ ಮಾಹಿತಿ ಪಡೆದ ಪೋಲಿಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ ಎಂಬ ಮಾಹಿತಿ ಲಭಿಸಿದೆ.
ಕಡಬ ಠಾಣಾ ಎಸ್ ಐ ಅಭಿನಂದನ್ ಎಂ ಎಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದರು.