ಕಡಬ ಪಟ್ಟಣ ಪಂಚಾಯತ್‌ನಲ್ಲಿ 24/7 ಕಂಟ್ರೋಲ್ ರೂಂ :ತುರ್ತು ಸಂದರ್ಭದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚನೆ

Kadaba Times News

 ಕಡಬ ಪಟ್ಟಣ ಪಂಚಾಯತ್‌ನಲ್ಲಿ 24/7 ಕಂಟ್ರೋಲ್ ರೂಂ ತೆರೆಯಲಾಗಿದ್ದು, ಪಂಚಾಯತ್ ವ್ಯಾಪ್ತಿಯಲ್ಲಿ ಅನಾಹುತಗಳು ನಡೆದಾಗ ಸಾರ್ವಜನಿಕರು ದೂರವಾಣಿ 08251-298002 ಸಂಖ್ಯೆಯನ್ನು ಸಂಪಕಿಸುವಂತೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿಯವರು ಪ್ರಕಟಣೆ ನೀಡಿದ್ದು, ಯಾವುದೇ ರೀತಿಯ ಅನಾಹುತಗಳು, ಘಟನೆಗಳು ನಡೆದಾಗ ತುರ್ತು ಕೈಗೊಳ್ಳಲು ಸಹಕಾರಿಯಾಗುವ ನಿಟ್ಟಿನಲ್ಲಿ ಪಟ್ಟಣ ಪಂಚಾಯತ್ ನಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ.



ದಿನದ 24 ಗಂಟೆಯೂ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ತಾಲೂಕು ಆಡಳಿತದಲ್ಲಿಯೂ ಕಂಟ್ರೋಲ್ ರೂಂ ತೆರೆಯಲಾಗಿದೆ. ಅಲ್ಲಿಯೂ ಅಧಿಕಾರಿ, ಸಿಬ್ಬಂದಿಗಳಿದ್ದು, ಅಲ್ಲಿಗೂ ಮಾಹಿತಿ ನೀಡಬಹುದು. ತುರ್ತು ಕ್ರಮಕ್ಕಾಗಿ ಪಟ್ಟಣ ಪಂಚಾಯತ್ ಸಿದ್ಧವಿದೆ.

 ತಾಲೂಕು ಆಡಳಿತ, ಪೋಲೀಸ್ ಇಲಾಖೆ, ಅಗ್ನಿಶಾಮಕ, ಅರಣ್ಯ ಇಲಾಖೆ, ಅಗ್ನಿಶಾಮಕ, ಅರಣ್ಯ ಇಲಾಖೆ ಸೇರಿದಂತೆ ಎಲ್ಲರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top