




ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಅಡುಗೆ ರೂಮಿನಲ್ಲಿ ಹರಿತವಾದ ವಸ್ತುಗಳಿಂದ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು ಹಲ್ಲೆಗೊಳಗಾದ ಇಬ್ಬರಿಗೂ ತಲೆ,ಭುಜ ಸೇರಿದಂತೆ ದೇಹದ ಹಲವೆಡೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೆ ಒಳಗಾದವರು ನಟೋರಿಯಸ್ ಗಳಾಗಿದ್ದು ಹಲವಾರು ಪ್ರಕರಣಗಳ ಆರೋಪಿಗಳಾಗಿದ್ದಾರೆ.
ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ವಿರುದ್ದ ಜೈಲರ್ ನೀಡಿದ ದೂರಿನ ಅನ್ವಯ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.