ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ

ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ

Kadaba Times News
ಪುತ್ತೂರು: ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. 

ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಜೂ.11 ರಂದು ಬೆಂಗಳೂರಿನಿಂದ ಶಾಸಕರು ಕರೆ ಮಾಡಿ, ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡಿದ್ದಾರೆ ಎಂದರು. 

ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ ಎಂದು ತಿಳಿಸಿದರು.

ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top