ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

Kadaba Times News

ಕಡಬ ಟೈಮ್ಸ್: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ.




ಅಲ್ಲದೇ ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವುದು ಹಾಗೂ ಎಸ್ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇಧಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಕೆಳಕಂಡಂತೆ ಆದೇಶಿಸಿದೆ.


ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ


ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ನಿಷೇಧವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

Tags

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top