ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ

Kadaba Times News

. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ.


25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ   ಮಾಡಲಾಗಿದೆ.



2016 ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.


Inspector General of Police, Central Range ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನು Inspector General of Police, Headquarters-1ಗೆ ವರ್ಗಾವಣೆ ಮಾಡಲಾಗಿದೆ. ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.


ಮೈಸೂರು ನಗರ ಪೊಲೀಸ್ ಕಮಿಷನರ್ ಬಿ.ರಮೇಶ್ ಅವರನ್ನು ಉಪ ಪೊಲೀಸ್ ಮಹಾನಿರೀಕ್ಷಕರು, ಪೂರ್ವ ವಲಯ, ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.


ಬೆಂಗಳೂರು ನಗರ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top