




ಸುಳ್ಯ: ಇತ್ತೀಚೆಗೆ ದ.ಕ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಸುದ್ದಿಯಾಗುತ್ತಿವೆ.ಇದೀಗ ಸುಳ್ಯದಲ್ಲಿ ಮಹಿಳೆಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಸೋಮವಾರ (ಜುಲೈ8 ರಂದು ) ತಡರಾತ್ರಿ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ಕುಸುಮಾ (45 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಸಾಂಸಾರಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.