




ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ.
ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹ ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಬಂದು ಶಿವಲಿಂಗವನ್ನು ಠಾಣೆಗೆ ಕೊಂಡು ಹೋಗಿದ್ದಾರೆ.
ಶಿವಲಿಂಗ ಬಸ್ ನಿಲ್ದಾಣದಲ್ಲಿ ಹೇಗೆ ಪತ್ತೆಯಾಯಿತು ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ.