




ಕಡಬ: ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ನಡುವೆ ಕಡಬ ತಾಲೂಕಿಗೂ ರಜೆ ಇದೆಯೇ ಎಂಬ ಪ್ರಶ್ನೆ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಪೋಷಕರು ಹಂಚಿಕೊಂಡಿದ್ದರು. ಈ ಬಗ್ಗೆ ಕಡಬ ತಹಶಿಲ್ದಾರ್ ಸ್ಪಷ್ಟನೆ ನೀಡಿದ್ದಾರೆ.
ಕಡಬ ಟೈಮ್ಸ್ ಜೊತೆ ಮಾತಾನಾಡಿದ ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ ಅವರು ಕಡಬ ತಾಲೂಕಿಗೆ ಯಾವುದೇ ರಜೆ ಇಲ್ಲ ,ವದಂತಿಗಳಿಗೆ ಕಿವಿಕೊಡಬೇಡಿ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ರಾತ್ರಿ ಧಾರಕಾರ ಮಳೆಸುರಿದ ಕಾರಣ ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಈ ದಿನ 4-07-2024 ರಂದು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.