




ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ವತಿಯಿಂದ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಾಧಿಕಾರಿಗಳಿಗೆ ನೀಡುವ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ಆಡಳಿತಾಧಿಕಾರಿ ಡಾ. ತ್ರಿಮೂರ್ತಿಯವರಿಗೆ ಲಭಿಸಿದೆ.
ಡಾ.
ತ್ರಿಮೂರ್ತಿ
ಅವರು ಕಡಬ ಸಮುದಾಯ ಅರೋಗ್ಯ ಕೇಂದ್ರದಲ್ಲಿ 16 ವರ್ಷ ಗಳ ಕಾಲ
ವೈದ್ಯಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು
ಬಳಿಕ 8 ವರ್ಷ ದಿಂದ
ಸುಬ್ರಹ್ಮಣ್ಯ ಪ್ರಾರ್ಥಮಿಕ ಅರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಅಲ್ಲದೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ಆಡಳಿತಾಧಿಕಾರಿಯೂ ಕರ್ತವ್ಯ
ನಿರ್ವಹಿಸುತ್ತಿದ್ದಾರೆ.
ಜನಸಾಮಾನ್ಯರ ಸೇವೆ ಮಾಡುತ್ತಾ
ಸೌಮ್ಯ
ಸ್ವಭಾವದ ಮೂಲಕ ಎಲ್ಲರಿಗೂ ಅಚ್ಚುಮೆಚ್ಚಿನ ಡಾಕ್ಟರ್ ಎಂದು ಸಾರ್ವಜನಿಕ ವಲಯದಲ್ಲಿ ಹೆಸರುವಾಸಿಯಾಗಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಈ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.