




ಕಡಬ/ಉಳ್ಳಾಲ: ಉಳ್ಳಾಲ ಖಾಝಿ, ಮರ್ಹೂ೦ ಶೈಖುನಾ ತಾಜುಲ್ ಉಲಮಾ ಅಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಜಳ್ ಅವರ ಪುತ್ರ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಬುಖಾರಿ (ಕೂರತ್ ತಂಙಳ್) (65 ವ) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸೋಮವಾರ ಮುಂಜಾನೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಸೋಮವಾರ ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ
ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
![]() |
ಅಸೈಯದ್ ಫಝಲ್ ಕೋಯಮ್ಮ ತಂಙಳ್ ಬುಖಾರಿ |
ಸೋಮವಾರ ಅಪರಾಹ್ನ
2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು . ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತರಲಾಗುತ್ತದೆ. ಅಲ್ಲಿ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಆ
ಬಳಿಕ ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ದಫನ
ಕಾರ್ಯ ನೆರವೇರಲಿದೆ.
ಸಮಸ್ತ
ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಕಾಸರಗೋಡು ದೇಳಿಯ ಜಾಮಿಯ ಸಅದಿಯ್ಯ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೂರತ್ ತಂಜಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.