High court order: 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ : ಹೈಕೋರ್ಟ್ ಆದೇಶ

High court order: 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ : ಹೈಕೋರ್ಟ್ ಆದೇಶ

Kadaba Times News

 ಕಡಬ ಟೈಮ್ಸ್:   50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆಗೆ ವಿನಾಯಿತಿ ಇದ್ದರೂ ಸಹ ಸರಕಾರ 55 ವರ್ಷ ಹಾಗೂ 58 ವರ್ಷದ ಇಬ್ಬರು ಮಹಿಳಾ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರು ಎಂದು ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆಅಲ್ಲದೆ, ನಿಯಮಗಳಲ್ಲಿ ವರ್ಗಾವಣೆ ಮಾಡುವುದಕ್ಕೆ ವಿನಾಯಿತಿ ಇದ್ದಾಗ ಅವರು ಅರ್ಜಿ ಸಲ್ಲಿಸಲಿ ಅಥವಾ ಬಿಡಲಿ ನಿಯಮವನ್ನು ಅಧಿಕಾರಿಗಳು ಜಾರಿಗೊಳಿಸಬೇಕು ಎಂದು ಆದೇಶಿಸಿದೆ.

                                          Representational image | Photo Credit: Mathrubhumi



ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮಾದೇವಿ ಹುಂಡೇಕರ್(55) ಮತ್ತು ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಪ್ರಭಾವತಿ ರೋಣದ್(58) ಅವರನ್ನು ಹೆಚ್ಚುವರಿ ಶಿಕ್ಷಕರೆಂದು ಸರಕಾರ ವರ್ಗಾವಣೆ ಮಾಡಿತ್ತು. ಇದನ್ನು ಪ್ರಶ್ನಸಿ ಅವರು ಕೆಎಟಿ ಮೊರೆ ಹೋಗಿದ್ದರು.

 ಕೆಎಟಿ ಅವರ ಅರ್ಜಿ ಮಾನ್ಯ ಮಾಡಿ ಸರ್ಕಾರದ ಆದೇಶವನ್ನು ರದ್ದು ಮಾಡಿತ್ತು. ಕೆಎಟಿ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯಪೀಠ ಅದೇಶವನ್ನು ಮಾಡಿದೆ.


ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಶಾಸನದಲ್ಲಿ ಅನೂಕೂಲಕರ ಅಂಶಗಳನ್ನು ಅಳವಡಿಸಿದಾಗ, ಅದನ್ನು ಫಲಾನುಭವಿಗಳ ಪರವಾಗಿ ಜಾರಿಗೊಳಿಸಬೇಕು. ಅದು ಬಿಟ್ಟು ಫಲಾನುಭವಿ ಅರ್ಜಿ ಸಲ್ಲಿಸಿದ್ದಾರೆಯೇ ಇಲ್ಲವೇ ಎಂಬುದನ್ನು ನೋಡಬಾರದೆಂದು ಹೇಳಿದೆ. ಕೆಎಟಿ ಮುಂದೆ ಅರ್ಜಿ ಸಲ್ಲಿಸಿದ್ದ ಶಿಕ್ಷಕರಿಬ್ಬರೂ ಮಹಿಳಾ ಶಿಕ್ಷಕಿಯರಾಗಿದ್ದಯ, ಅವರು 50 ವರ್ಷ ಮೇಲ್ಪಟ್ಟವರು, ಅವರು ಕರ್ನಾಟಕ ರಾಜ್ಯ ನಾಗರಿಕ ಸೇವಾ (ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯಿದೆ)2020 ಸೆಕ್ಷನ್ 10(1)(6) ಅನ್ವಯ ಅವರ ವರ್ಗಾವಣೆಗೆ ವಿನಾಯಿತಿ ಇದೆ. ಅವರನ್ನು ಹೆಚ್ಚುವರಿ ಶಿಕ್ಷಕರೆಂದು ಘೋಷಿಸಿ, ವರ್ಗಾವಣೆ ಮಾಡಬಾರದಿತ್ತು ಎಂದು ನ್ಯಾಯಾಲಯ ಹೇಳಿದೆ.


ಮಕ್ಕಳು-ಶಿಕ್ಷಕರ ಅನುಪಾತವನ್ನು ಆಧರಿಸಿ ಶಾಲೆಯಲ್ಲಿ ಎಷ್ಟು ಶಿಕ್ಷಕರು ಇರಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ವೇಳೆ ಕರ್ನಾಟಕ ರಾಜ್ಯ ನಾಗರಿಕ ಸೇವಾ (ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯಿದೆ)2020 ಸೆಕ್ಷನ್ 10(1)(6) ಅನ್ವಯ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆಗೆ ವಿನಾಯಿತಿ ಇರುವ ಅಂಶವನ್ನು ಪರಿಗಣಿಸಬೇಕಾಗುತ್ತದೆ. ಆದರೆ ಅದರ ಬದಲು ಅವರನ್ನು ಹೆಚ್ಚುವರಿ ಶಿಕ್ಷಕರೆಂದು ಘೋಷಿಸಿರುವುದು ಸರಿಯಲ್ಲಎಂದು ನ್ಯಾಯಪೀಠ ಆದೇಶಿಸಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top