ಕುಕ್ಕೆ ಸುಬ್ರಹ್ಮಣ್ಯ: ಬಾಯಲ್ಲಿ ನೊರೆ ಕಾರುತ್ತಾ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತ್ಯು: ಗುರುತು ಪತ್ತೆಗೆ ಪೊಲೀಸರ ಮನವಿ

ಕುಕ್ಕೆ ಸುಬ್ರಹ್ಮಣ್ಯ: ಬಾಯಲ್ಲಿ ನೊರೆ ಕಾರುತ್ತಾ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತ್ಯು: ಗುರುತು ಪತ್ತೆಗೆ ಪೊಲೀಸರ ಮನವಿ

Kadaba Times News

 ಕುಕ್ಕೆ ಸುಬ್ರಹ್ಮಣ್ಯ:  ಇತ್ತೀಚೆಗೆ ಸುಬ್ರಹ್ಮಣ್ಯ ವನದುರ್ಗಾ ದೇವಿ ದೇವಸ್ಥಾನದ ಬಳಿ ಅಸೌಖ್ಯಗೊಂಡು ಬಾಯಲ್ಲಿ ನೊರೆ ಕಾರುತ್ತಾ ಒದ್ದಾಡುತ್ತಿದ್ದ ವ್ಯಕ್ತಿಯೋರ್ವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು.


ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.



ಕುಂದಾಪುರ ಮೂಲದ ಚಂದ್ರ ಎಂದು ಹೇಳಿಕೊಂಡು ಸುಬ್ರಹ್ಮಣ್ಯ ಪರಿಸರದಲ್ಲಿ ಕಳೆದ 10-12 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಆದರೆ ಇವರ ಬಗ್ಗೆ ಹೆಚ್ಚಿನ ವಿವರಗಳು ತಿಳಿದಿಲ್ಲ.ಈ ಬಗ್ಗೆ ಅರ್ಚಕ ಶಿವ ಕುಮಾರ್ ಎಂಬರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


ಮೃತ ವ್ಯಕ್ತಿಯ ಬಗ್ಗೆ ತಿಳಿದವರು, ಕುಟುಂಬಸ್ಥರು ಅಥವಾ ವಾರಸುದಾರರು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸಂಪರ್ಕಿಸಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top