


ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದಿದ್ದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಸೋಮವಾರ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ
ಪತ್ನಿಯ ಮೇಲೆ ಸಿಟ್ಟಿ ಗೆದ್ದ ಹಾಸನದ ಪೊಲೀಸ್ ಕಾನ್‌ಸ್ಟೇಬಲ್ ಲೋಕನಾಥ್ ಈ ದುಷ್ಕೃತ್ಯ ಎಸಗಿದ್ದಾನೆ.
ಎಸ್ಪಿ ಕಚೇರಿ ಆವರಣದಲ್ಲೇ ಚಾಕುವಿನಿಂದ ಇರಿದು ಪತ್ನಿಯನ್ನು ಹತ್ಯೆ ಮಾಡಿದ್ದಾರೆ
ಕೃತ್ಯದ ಬಳಿಕ ಪೊಲೀಸರು ಆರೋಪಿ ಪತಿ ಲೋಕನಾಥ್ ನನ್ನು ವಶಕ್ಕೆ ಪಡೆದಿದ್ದಾರೆ.