




ಕಡಬ ಟೈಮ್: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಆ.21ರಂದು ಕಡಬ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಸಲಿದ್ದಾರೆ.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.
ಸಾರ್ವಜನಿಕರಿಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.
ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು ಈ ವಿಳಾಸಕ್ಕೆ ಸಲ್ಲಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.