


ಕಡಬ: ಇನ್‌ಸ್ಪೆಕ್ಟರ್ ಜನರಲ್ (ಐಜಿ) ಅಮಿತ್ ಸಿಂಗ್ ಅವರು (ಸೋಮವಾರ) ಆ.5 ರಂದು ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಎಸ್. ಐ ಅಭಿನಂದನ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಬಳಿಕ ಪೊಲೀಸ್ ಠಾಣೆಯಲ್ಲಿ ಪರಿವೀಕ್ಷಣೆ ಮಾಡಿ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಪಿ ಯತೀಶ್ ಎನ್ ( IPS),
ಅಡಿಷನಲ್ ಎಸ್‌ಪಿ ರಾಜೇಂದ್ರ, ಡಿವೈಎಸ್‌ಪಿ ಅರುಣ್‌ನಾಗೇಗೌಡ, ವೃತ್ತ ನಿರೀಕ್ಷಕ ರವಿ, ಠಾಣಾ ಎಸೈ ಅಭಿನಂದನ್ ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.