court affidavit: ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆಯೆಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿ ಕೋರ್ಟ್‌ಗೆ ಅಫಿದವಿಟ್ ಸಲ್ಲಿಕೆ

court affidavit: ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆಯೆಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿ ಕೋರ್ಟ್‌ಗೆ ಅಫಿದವಿಟ್ ಸಲ್ಲಿಕೆ

Kadaba Times News
0

 ಕಡಬ ಟೈಮ್, ರಾಮೇಶ್ವರಂ ಕೆಫೆ ಸೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಕುರಿತು ಕ್ಷಮೆಯಾಚಿಸುವುದಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅಫಿದವಿಟ್ ಸಲ್ಲಿಸಿದ್ದಾರೆ.



ರಾಮೇಶ್ವರಂ ಕೆಫೆ ಸೋಟ ಪ್ರಕರಣಕ್ಕೆ ಸಂಬಂಂಧಿಸಿ ತಮಿಳರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಶೋಭಾ ಕರಂದ್ಲಾಜೆ ಅವರ ಪರ ವಕೀಲರು ಕೋರ್ಟ್‌ನಲ್ಲಿ ಸೆ.3ರಂದು ಅಫಿಡವಿಟ್ ಸಲ್ಲಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಿದ್ದಾರೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಶೋಭಾ ಪರವಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಸೆ.3ರಂದು ಮತ್ತೆ ವಿಚಾರಣೆಗೆ ಬಂದಿತ್ತು.


ಶೋಭಾ ಪರ ವಾದ ಮಂಡಿಸಿದ ವಕೀಲರು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು. ಬಾಂಬ್ ಸೋಟದಲ್ಲಿ ತಮಿಳರು ಭಾಗಿಯಾಗಿದ್ದಾರೆ ಎಂಬ ಹೇಳಿಕೆಯನ್ನು ತಮಿಳರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿಲ್ಲ.ಇದಲ್ಲದೆ, ಅವರ ಹೇಳಿಕೆಯು ತಮಿಳರ ಭಾವನೆಗೆ ಧಕ್ಕೆತಂದಿದೆ. ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ.ತಮಿಳರ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.


ಸಚಿವೆ ಶೋಭಾ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ಅವರ ಪರವಾಗಿ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.ಇದಾದ ಬಳಿಕ,ಸರ್ಕಾರದಿಂದ ಸೂಕ್ತ ಸೂಚನೆ ಪಡೆದು ತಿಳಿಸುವುದಾಗಿ ತಮಿಳ್ನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.೫ರಂದು ನಡೆಸುವುದಾಗಿ ಹೇಳಿ ನ್ಯಾಯಾಧೀಶರು ಪ್ರಕರಣವನ್ನು ಮುಂದೂಡಿದರು.


ಪ್ರಕರಣದ ಹಿನ್ನೆಲೆ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು.ನಂತರ ಸಂಬಂಧ ಡಿಎಂಕೆಯಿಂದ ತ್ಯಾಗರಾಜನ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆಗೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top