ದಕ್ಷಿಣ ಕನ್ನಡ: ರಸ್ತೆ ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳು: ಸ್ಕೂಟರ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ ಲೇಡಿ ಪೊಲೀಸ್

ದಕ್ಷಿಣ ಕನ್ನಡ: ರಸ್ತೆ ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳು: ಸ್ಕೂಟರ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ ಲೇಡಿ ಪೊಲೀಸ್

Kadaba Times News
0

 

ಕದ್ರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್  ಮುರ್ಶಿದಾ ಬಾನು

ಮಂಗಳೂರು:  ಭೀಕರ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ  ಕಾನ್ಸ್ಟೇಬಲ್ವೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.


ನಗರದ ಕೆಪಿಟಿಯಲ್ಲಿ ಘಟನೆ ನಡೆದಿದ್ದು ಕದ್ರಿ ಪೊಲೀಸ್ ಠಾಣೆಯ ಮುರ್ಶಿದಾ ಬಾನು ಸಮಯಪ್ರಜ್ಞೆ ಮೆರೆದ ಕಾನ್ಸ್ಟೇಬಲ್ ಆಗಿದ್ದಾರೆ. ಇವರು ಬುಧವಾರ ನಸುಕಿನ ಜಾವ 4ಗಂಟೆ ವೇಳೆಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಕೆಪಿಟಿ ಬಳಿಯ ವ್ಯಾಸನಗರದ ತಿರುವಿನಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ವೊಂದಕ್ಕೆ ಕೋಳಿ ಸಾಗಾಟದ ಪಿಕಪ್ ವಾಹನ ಡಿಕ್ಕಿಯಾಗಿತ್ತು.


ಅಪಘಾತದ ತೀವ್ರತೆಗೆ ಪಿಕಪ್ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನದ ಕ್ಲೀನರ್ ತೀವ್ರವಾಗಿ ಗಾಯಗೊಂಡಿದ್ದರು. ಕೈ, ಕಾಲು ಮತ್ತು ಮುಖಕ್ಕೆ ಜಜ್ಜಿದ ಗಾಯವಾಗಿದ್ದರಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅಪಘಾತದಲ್ಲಿ ಚಾಲಕನಿಗೂ ಗಾಯಗಳಾದ ಹಿನ್ನೆಲೆ ಅವರು ಕೂಡ ಏನೂ ಮಾಡಲಾಗದ ಸ್ಥಿತಿಯಲ್ಲಿದ್ದು, ಚೀರಾಡುತ್ತಿದ್ದರು.


ಆಗ ಕಾನ್ಸ್ಟೇಬಲ್ ಮುರ್ಶಿದಾ ಬಾನು, ಸ್ಥಳಕ್ಕೆ ತೆರಳಿ ಕ್ಲೀನರ್ನನ್ನು ಎತ್ತಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕ ನಿಲ್ಲುವ ಸ್ಥಿತಿಯಲ್ಲಿ ಇಲ್ಲದಿದ್ದರೂ, ಆಟೋ ಸಿಗದ ಕಾರಣ ತನ್ನ ಸ್ಕೂಟರ್ನಲ್ಲೇ ಒಂದು ಕೈಯಲ್ಲಿ ಆತನನ್ನು ಹಿಡಿದುಕೊಂಡು ಆಸ್ಪತ್ರೆಗೆ ತಲುಪಿಸಿದ್ದಾರೆ. ಅಲ್ಲಿ ಉರ್ವ ಠಾಣೆಯ ಪಿಸಿಆರ್ ಪೊಲೀಸರು ಇದ್ದ ಕಾರಣ ಅವರ ಸಹಾಯದಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ನಂತರ, ಕದ್ರಿ ಟ್ರಾಫಿಕ್ ಪೊಲೀಸರಿಗೆ ವಿಷಯ ತಿಳಿಸಿದ ಬಳಿಕ ಅವರು ಅಪಘಾತ ಸ್ಥಳಕ್ಕೆ ಬಂದಿದ್ದಾರೆ. ರಸ್ತೆ ಬದಿಯಲ್ಲಿದ್ದ ಪಿಕಪ್ ವಾಹನ ಚಾಲಕನನ್ನು ಇತರ ವಾಹನದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇರಳ ನೋಂದಣಿಯ ಪಿಕಪ್ ವಾಹನವಾಗಿದ್ದು, ಅವರ ಹೆಸರು ತಿಳಿದಿಲ್ಲ ಎಂದು ಮುರ್ಶಿದಾ ಬಾನು ತಿಳಿಸಿದ್ದಾರೆ.


ಮುರ್ಶಿದಾ ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಸುಕಿನ ಜಾವ ತಮ್ಮದೇ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಅವರ ಮಾನವೀಯತೆಗೆ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top