ನೆಲ್ಯಾಡಿ:ಲಾವತ್ತಡ್ಕ ಬಳಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್: ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ:ಲಾವತ್ತಡ್ಕ ಬಳಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್: ಚಾಲಕ ಸ್ಥಳದಲ್ಲೇ ಮೃತ್ಯು

Kadaba Times News
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಸ್ಲೀಪರ್ ಬಸ್​, ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ನಡೆದಿದೆ. 

ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಸ್​​ ನದಿಗೆ ಬಿದ್ದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಚಾಲಕ ಭರತ್ (28) ಮೃತ ಚಾಲಕ ಎಂದು ಗುರುತಿಸಲಾಗಿದೆ. 

ಈ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿತ್ತು. ಇಲ್ಲಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಗೋಕರ್ಣದಿಂದ ಚಾಲಕ ಮತ್ತು ಸಹ-ಚಾಲಕ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು - ನೋವು ಸಂಭವಿಸಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top