


![]() |
Lady Goschen Hospital Mangaluru(kadaba times) |
ಕಡಬ ಟೈಮ್: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ನ.11) ಮುಂಜಾನೆ ನಡೆದಿದೆ.
ಮೃತಪಟ್ಟ ಮಹಿಳೆ ಕಾರ್ಕಳದ ರಂಜಿತಾ (28) ಎಂದು ಗುರುತಿಸಲಾಗಿದೆ.
ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದ
ಮಹಿಳೆ ಹಲವು ಕ್ಲಿಷ್ಟ ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿದ್ದು, ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು.
ಮಹಿಳೆ ಗುಣಮುಖರಾಗಿ
ಸೋಮವಾರ ಡಿಸ್ಜಾರ್ಜ್ ಆಗುವುದಾಗಿ ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು
ತಿಳಿದು ಬಂದಿದೆ.
ಕೂಡಲೇ ಮಹಿಳೆಯನ್ನು ವೆನ್ಲಾಕ್
ಆಸ್ಪತ್ರೆಗೆ ದಾಖಲಿಸಿದರೂ ಆಕೆ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.