ಧರ್ಮಸ್ಥಳ: ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದ ಪತ್ರಕರ್ತ ಚಿಕಿತ್ಸೆ ಫಲಿಸದೆ ನಿಧನ

ಧರ್ಮಸ್ಥಳ: ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದ ಪತ್ರಕರ್ತ ಚಿಕಿತ್ಸೆ ಫಲಿಸದೆ ನಿಧನ

Kadaba Times News
0

 


ಧರ್ಮಸ್ಥಳ: ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪತ್ರಕರ್ತರೋರ್ವರು ಚಿಕಿತ್ಸೆ ಫಲಿಸದೆ  . 19 ರಂದು ನಿಧನರಾಗಿದ್ದಾರೆ.


ಧರ್ಮಸ್ಥಳ ಸಮೀಪದ ಪುಡುವೆಟ್ಟು ನಿವಾಸಿ  ಪತ್ರಕರ್ತ   ಭುವನೇ0ದ್ರ ಪುಡುವೆಟ್ಟು ( 42 ) ಮೃತಪಟ್ಟವರು.


ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ .19ರಂದು ಕೊನೆಯುಸಿರೆಳೆದಿದ್ದಾರೆ.


ಕರಾವಳಿ ಅಲೆ, ವೆಬ್ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿ ಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕರ್ತವ್ಯದಲ್ಲಿದ್ದರು.


ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top