ಕಸ್ತೂರಿ ರಂಗನ್ ವರದಿಯ ವಿರುದ್ಧ ಗುಂಡ್ಯದಲ್ಲಿ ಪ್ರತಿಭಟನೆ ಆರಂಭ

ಕಸ್ತೂರಿ ರಂಗನ್ ವರದಿಯ ವಿರುದ್ಧ ಗುಂಡ್ಯದಲ್ಲಿ ಪ್ರತಿಭಟನೆ ಆರಂಭ

Kadaba Times News
0

 

ಸಭೆ ಆರಂಭಗೊಂಡಿರುವುದು(KADABA TIMES)

ಕುಕ್ಕೆ ಸುಬ್ರಹ್ಮಣ್ಯ:  ಕಸ್ತೂರಿ ರಂಗನ್ ವರದಿಯ ವಿರುದ್ಧ ಹಾಗೂ ಭಾಗದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ವತಿಯಿಂದ ಕಡಬ, ಸುಳ್ಯ, ಬೆಳ್ತಂಗಡಿ  ತಾಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರ ಪಾಲ್ಗೊಳ್ಳುವಿಕೆಯೊಂದಿಗೆ .೧೫ರಂದು ಬೃಹತ್ ಪ್ರತಿಭಟನಾ ಸಭೆಯು ಶಿರಾಡಿ ಗ್ರಾಮದ ಗುಂಡ್ಯದಲ್ಲಿ  ಆರಂಭಗೊಂಡಿದೆ.

ಜಾತ್ಯತೀತ, ಪಕ್ಷಾತೀತ, ಕಾನೂನಾತ್ಮಕ ಮತ್ತು ವಿಷಯಾಧಾರಿತ ಹೋರಾಟದ ಪ್ರತಿಭಟನೆಯು  ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ  ಅಧಕ್ಷತೆಯಲ್ಲಿ  ನಡೆಯುತ್ತಿದೆ. ರೈತ ಗೀತೆಯೊಂದಿಗೆ ಸಭೆ ಆರಂಭಗೊಂಡ ಈ ಸಭಾ ಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು  ಸುಬಾಷ್ ಚಂದ್ರ ಬೋಸ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಗೈದು ದೀಪ ಬೆಳಗಿಸಿ ಉದ್ಘಾಟಿಸಿದರು.

 

ಪ್ರತಿಭಟನಾ ಸಭೆಯಲ್ಲಿ ಕಡಬ-ಸುಳ್ಯ-ಬೆಳ್ತಂಗಡಿ  ತಾಲೂಕಿನ  ಕಾಂಗ್ರೆಸ್, ಬಿಜೆಪಿ ನಾಯಕರು, ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದಾರೆ. ಪೊಲೀಸರು ಸೂಕ್ತ ಬಂದೋಬಸ್ ಒದಗಿಸಿದ್ದಾರೆ.


 ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿ, ಅರಣ್ಯ ಭೂಮಿ ನಡುವೆ ಆನೆ ಕಂದಕ ನಿರ್ಮಿಸಬೇಕು, ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು, ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಬೇಕು, ರೈತರಿಗೆ ಕೋವಿ ಪರವಾನಗಿ ನೀಡಬೇಕು, ಪಶ್ಚಿಮ ಘಟ್ಟಕ್ಕೆ ಸಂಬಂಧಪಟ್ಟಂತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮ ಘಟ್ಟ ಪ್ರದೇಶದ ಗ್ರಾ.ಪಂ.ಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ವಿಶೇಷ ಗ್ರಾಮ ಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕು ಮುಂತಾದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಪ್ರತಿಭಟನೆಯಲ್ಲಿ ಬೇಡಿಕೆಗಳನ್ನು ಮುಂದಿಡಲಿದ್ದಾರೆ.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top