


ಕಡಬ ಟೈಮ್ಸ್, ಪ್ರಮುಖ ಸುದ್ದಿ: ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ (92 ವರ್ಷ) ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
![]() |
ಡಾ. ಮನಮೋಹನ್ ಸಿಂಗ್ (92 ವರ್ಷ) |
ಗುರುವಾರ ಸಂಜೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ, ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ (ಡಿ.27) ಸರಕಾರಿ ರಜೆ ಘೋಷಿಸಲಾಗಿದೆ. ಇಂದು (ಶುಕ್ರವಾರ) ರಾಜ್ಯದಲ್ಲಿ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.