Cyclone 'Fengal' Impact:ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Cyclone 'Fengal' Impact:ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Kadaba Times News
ಕಡಬ ಟೈಮ್ಸ್, ದಕ್ಷಿಣ ಕನ್ನಡ: ತಮಿಳುನಾಡು ಕರಾವಳಿ ತೀರದಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ರಾಜ್ಯದ ಮೇಲೂ ಪರಿಣಾಮ ಬೀರಿದ್ದು, ಹವಾಮಾನ ಇಲಾಖೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.


ನಾಳೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದೇ ಭಾಗದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.


ಸೋಮವಾರ ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top